September 20, 2024

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ

0

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ ತೆರೆಬಿದ್ದಿದೆ.

ನಗರದ ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿದ್ದ ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು.

ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ ಎಂದರು.

‘ನಿಮ್ಮ ಅಭಿಮಾನ ತಿರಸ್ಕರಿಸಲು ಸಾಧ್ಯವೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ನಾನೇ ಅಭ್ಯರ್ಥಿ’ ಎಂದು ಘೋಷಿಸಿದರು.

Leave a Reply

Your email address will not be published. Required fields are marked *

error: Content is protected !!