September 20, 2024

ರಸ್ತೆಗೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್: ತಾಯಿ ಮತ್ತು ಮಗು ಮೃತ್ಯು

0

ಬೆಂಗಳೂರು: ಬೆಂಗಳೂರಿನ ಹೆಚ್​ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು.

ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!