February 4, 2026

ಶಬರಿಮಲೆಗೆ ಬರುವ ಯಾತ್ರಿಗಳ ಫೋಟೋ, ಪೋಸ್ಟರ್‌ ತರಬಾರದು: ಕೇರಳ ಹೈಕೋರ್ಟ್‌ ತೀರ್ಪು

0
image_editor_output_image428090471-1673335789793.jpg

ತಿರುವನಂತಪುರಂ: ಶಬರಿಮಲೆಗೆ ಬರುವ ಯಾತ್ರಿಗಳು ಸೆಲೆಬ್ರಿಟಿಗಳ ಫೋಟೋ, ಪೋಸ್ಟರ್‌ ಗಳನ್ನು ಹಿಡಿದುಕೊಂಡು ಬಂದರೆ ಅಂಥವರಿಗೆ ಸನ್ನಿಧಾನ ಪ್ರವೇಶಕ್ಕೆ ಅವಕಾಶ ನೀಡಬಾರದೆಂದು ಕೇರಳ ಹೈಕೋರ್ಟ್‌ ಸೋಮವಾರ(ಜ.9 ರಂದು) ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿ ಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಯಾತ್ರಾರ್ಥಿಯೊಬ್ಬರ ದೂರಿನ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ನಡೆಸಿ ತಿರುವಾಂಕೂರು ದೇವಸ್ವಂ ಮಂಡಳಿಗೆ ಪ್ರತಿಯೊಬ್ಬ ಅಯ್ಯಪ್ಪನ ಭಕ್ತ ತನ್ನ ಪೂಜಾ ಆರಾಧನವನ್ನು ಪದ್ದತಿಯಂತೆ, ಸಾಂಪ್ರದಾಯಿಕ ವಿಧಿಗಳಂತೆ ಮಾಡುವುದನ್ನು ನೋಡಿಕೊಳ್ಳಬೇಕೆಂದು ನಿರ್ದಶನ ನೀಡಿದೆ.

Leave a Reply

Your email address will not be published. Required fields are marked *

You may have missed

error: Content is protected !!