March 26, 2026

ಬಂಟ್ವಾಳದ ಕಾರಿಂಜೇಶ್ವರ ದೇವಾಲಯದ ಸುತ್ತಮುತ್ತ ಪ್ರದೇಶ ಸೂಕ್ಷ್ಮ ವಲಯ ಘೋಷಣೆ ವಿಚಾರ: ಸರಕಾರದ ಜೊತೆ ಚರ್ಚೆ ಬಳಿಕ ನಿರ್ಧಾರ: ಸಚಿವ ಸುನಿಲ್ ಕುಮಾರ್

0
IMG-20230110-WA0064.jpg

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯದ ಸುತ್ತಮುತ್ತ ಪ್ರದೇಶಗಳನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು.

ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಸಾನಿಧ್ಯಕ್ಕೆ ಅಪಾಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಭಕ್ತರು ಮತ್ತು ಹಿಂದೂಜಾಗರಣ ವೇದಿಕೆಯ ಕಾರ್ಯಕರ್ತರು ಈ ಬಗ್ಗೆ ಸ್ಥಳೀಯ ಶಾಸಕ ಹಾಗೂ ನನ್ನ ಗಮನ ಕ್ಕೆ ತಂದಿದ್ದರು.

ಈ ಹಿನ್ನೆಲೆ ಯಲ್ಲಿ ಈಗಾಗಲೇ ಸಾಕಷ್ಟು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದ್ದು, ಧಾರ್ಮಿಕ ಸೂಕ್ಮ ಪ್ರದೇಶ ಘೋಷಣೆ ಯ ನಿರ್ಧಾರ ಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!