ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಮಡಿಕೇರಿ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.
ಬಡಾವಣೆ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.




