ಶಿವಮೊಗ್ಗ: ಶಾಲೆಗೆ ಹೊರಡುತಿದ್ದಾಗ ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ
ಶಿವಮೊಗ್ಗ : ಸಣ್ಣ ವಯಸ್ಸಿನ ಮಕ್ಕಳು ಹೃದಾಯಾಘಾತಕ್ಕೆ ಬಲಿಯಾಗುತ್ತಿರು ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ.
10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ.
ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದಾಗ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಆದರೆ ಅಷ್ಟೊತ್ತಿಗಾಗಲೇ ಜಯಂತ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.




