ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಕಲ್ಲು ಪತ್ತೆ
ನವದೆಹಲಿ: ವಿಮಾನದಲ್ಲಿ ತನಗೆ ನೀಡಿದ ಆಹಾರದಲ್ಲಿ ಕಲ್ಲು ಕಂಡುಬಂದಿದೆ ಎಂದು ಪ್ರಯಾಣಿಕರೊಬ್ಬರು ದೂರಿದ ನಂತರ, ವಿಮಾನಯಾನ ಸಂಸ್ಥೆ ಮಂಗಳವಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಆಹಾರ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಜನವರಿ 8 ರಂದು ಮಹಿಳಾ ಪ್ರಯಾಣಿಕರೊಬ್ಬರು AI 215 ನಲ್ಲಿನ ವಿಮಾನದ ಆಹಾರದಲ್ಲಿ ಕಲ್ಲು ಕಂಡುಬಂದಿದೆ ಎಂದು ಟ್ವೀಟ್ ಮಾಡಿದ್ದು, ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಈ ವಿಮಾನ ದೆಹಲಿಯಿಂದ ಕಾಠ್ಮಂಡುವಿಗೆ ಪ್ರಯಾಣಿಸುತ್ತಿತ್ತು.
AI 215 ನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ಆಹಾರದಲ್ಲಿ ಕಲ್ಲು ಪತ್ತೆಯಾದ ಘಟನೆಯನ್ನು ಏರ್ ಇಂಡಿಯಾ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ಪ್ರಯಾಣಿಕರಲ್ಲಿ ಕ್ಷಮೆಯಾಚಿಸುತ್ತೇವೆ ಎಂದು ಏರ್ ಇಂಡಿಯಾ ವಕ್ತಾರರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ರೀತಿಯ ನಿರ್ಲಕ್ಷ್ಯ ಸ್ವೀಕಾರಾರ್ಹವಲ್ಲ ಎಂದು ಏರ್ ಇಂಡಿಯಾವನ್ನು ಟ್ಯಾಗ್ ಮಾಡಿದ್ದಾರೆ. ಟ್ವೀಟ್ಗೆ ಪ್ರತಿಕ್ರಿಯಿಸಿದ ಏರ್ ಇಂಡಿಯಾ, ‘ಈ ಸಂಬಂಧ ಆಹಾರ ತಯಾರಿಸಿದ ತಂಡದೊಂದಿಗೆ ಮಾತನಾಡುತ್ತೇವೆ ಮತ್ತು ಕ್ರಮ ತೆಗೆದುಕೊಳ್ಳುತ್ತೇವೆ. ದಯವಿಟ್ಟು ಹಿಂತಿರುಗಲು ನಮಗೆ ಸ್ವಲ್ಪ ಸಮಯ ನೀಡಿ. ಇದನ್ನು ನಮ್ಮ ಗಮನಕ್ಕೆ ತಂದಿದ್ದಕ್ಕಾಗಿ ನಾವು ಪ್ರಶಂಸಿಸುತ್ತೇವೆ’ ಎಂದು ಏರ್ಲೈನ್ ಜನವರಿ 8 ರಂದು ಟ್ವೀಟ್ನಲ್ಲಿ ತಿಳಿಸಿದೆ.