ನಮ್ಮ ಮೆಟ್ರೋ ದುರಂತ ಪ್ರಕರಣ: 9 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟೀಸ್ ಜಾರಿ
ಬೆಂಗಳೂರು: ‘ನಮ್ಮ ಮೆಟ್ರೋ’ ದುರಂತದಲ್ಲಿ ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು 9 ಮಂದಿ ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ.
ಇಂದು ಜ.12 ರಂದು ಗೋವಿಂದಪುರ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ 9 ಮಂದಿ ಆರೋಪಿಗಳಿಗೆ ಪೊಲೀಸರು ನಿನ್ನೆ ನೋಟಿಸ್ ಜಾರಿ ಮಾಡಿದ್ದಾರೆ.
ಎ.1 ನಾಗಾರ್ಜುನ ಕನ್ ಸ್ಟಕ್ಷನ್ ಕಂಪನಿ, ಎ.2 ಪ್ರಭಾಕರ್, ಎ.3 ಚೈತನ್ಯ, ಎ.4 ಮಥಾಯಿ, ಎ.5 ವಿಕಾಸ್ ಸಿಂಗ್ , ಎ 6 .ಲಕ್ಷ್ಮೀಪತಿ, ಎ.7 ಬಿಎಂಆರ್ ಸಿಎಲ್ ಡೆಪ್ಯುಟಿ ಚೀಪ್ ಇಂಜಿನಿಯರ್ ವೆಂಕಟೇಶ್ ಶೆಟ್ಟಿ, ಎ.8 ಮಹೇಶ್ ಬಂಡೇಕರಿ, ಎ.9 ಸಿದ್ದಿಕಿ ಸೇರಿ 9 ಮಂದಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಗಳು ರಸ್ತೆಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿತ್ತು. ಬೆಂಗಳೂರಿನ ನಾಗವಾರ ರಿಂಗ್ ರೋಡ್ ನ ಎಚ್ ಬಿಆರ್ ಲೇಔಟ್ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಾಯಿ- ಮಗು ಸಾವನ್ನಪ್ಪಿದ್ದಾರೆ. ಎಚ್ ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್ ಗಳು ಬಿದ್ದಿದ್ದು, ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತೆ ಫಲಕಾರಿಯಾಗದೇ ತಾಯಿ, ಮಗು ಸಾವನ್ನಪ್ಪಿದ್ದಾರೆ.




