February 2, 2026

ಕರ್ತವ್ಯ ಲೋಪ: ವಲಯ ಅರಣ್ಯಾಧಿಕಾರಿ ಶಿಲ್ಪಾ ಎಸ್.ಎಲ್  ಅಮಾನತು

0
image_editor_output_image232918148-1673498472329.jpg

ಹಾಸನ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವುದು, ಅವರಿಗೆ ನೀಡಿದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸುವಲ್ಲಿ ವೈಫಲ್ಯ, ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿಕೊಂಡು ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲವಾಗಿರುವುದು, ಅಧಿಕಾರಿ, ಸಿಬ್ಬಂದಿ ವರ್ಗದವರ ನಡುವೆ ಭಿನ್ನಾಭಿಪ್ರಾಯ ಉಂಟಾಗಲು ಹಾಗೂ ವಿಭಾಗದ ಮತ್ತು ವಲಯದ ಆಡಳಿತಾತ್ಮಕ ತೊಡಕು ಉಂಟಾಗಲು ನೇರ ಕಾರಣಕರ್ತರಾಗಿದ್ದಾರೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!