February 2, 2026

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಶಾಲಾ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0
image_editor_output_image-1607021603-1673500961038.jpg

ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.

ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್‌ ನಾಯಕ್ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!