ಪ್ರಸಾದಕ್ಕೆ ಬಳಸಲಾಗುವ ಏಲಕ್ಕಿಯಲ್ಲಿ ಕೀಟನಾಶಕ: ಶಬರಿಮಲೆ ಪ್ರಸಾದ ತಯಾರಿಕೆಗೆ ಕೇರಳ ಹೈಕೋರ್ಟ್ ತಡೆ
ಕೊಚ್ಚಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಾಲಯದ ಅರವಣ ಪ್ರಸಾದ ಮಾರಾಟ ಹಾಗೂ ತಯಾರಿಕೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ.
ಪ್ರಸಾದಕ್ಕೆ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೀಟನಾಶಕ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿರುವ ನ್ಯಾಯಾಲಯವು, ಪ್ರಸಾದ ಮಾರಾಟ ಮಾಡುವುದು ಬೇಡ ಎಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಗುತ್ತಿಗೆ ಪಡೆಯಲು ವಿಫಲವಾಗಿದ್ದ ಕಂಪನಿಯೊಂದು ಅರ್ಜಿ ಸಲ್ಲಿಸಿದ ಹಿನ್ನೆಲೆ ಹೈ ಕೋರ್ಟ್ ಪರೀಕ್ಷೆಗೆ ಆದೇಶ ನೀಡಿತ್ತು.
ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಪರೀಕ್ಷೆಗಳನ್ನು ಕಳೆದ ವಾರ ನಡೆಸಲಾಗಿತ್ತು. ಇದರಂತೆ ತಿರುವನಂತಪುರದ ರಾಜ್ಯ ಆಹಾರ ಸುರಕ್ಷಾ ಪ್ರಾಧಿಕಾರದ ಲ್ಯಾಬ್ ಮತ್ತು ಕೊಚ್ಚಿಯಲ್ಲಿರುವ ಭಾರತದ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಲ್ಯಾಬ್‌ಗಳಲ್ಲಿ ಅರವಣ ಪಾಯಸಂ ಅನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಮಿತಿ ಮೀರಿದ ಕೀಟನಾಶಕದ ಅಂಶ ಪತ್ತೆಯಾಗಿತ್ತು.




