March 29, 2026

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ನಿಧನ

0
whatsapp_image_2023-01-12_at_11.00.06_pm-sixteen_nine.jpeg

ನವದೆಹಲಿ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಈ ಕುರಿತು ಅವರ ಪುತ್ರಿ ಸುಭಾಷಿನಿ ಶರದ್ ಯಾದವ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನಮ್ಮ ತಂದೆ, ಕೇಂದ್ರ ಮಾಜಿ ಸಚಿವ ಶರದ್ ಯಾದವ್ ನಿಧನರಾಗಿದ್ದಾರೆ‌ ಎಂದು ತಿಳಿಸಿದರು.

ಮಾಜಿ ಸಚಿವರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶರದ್ ಯಾದವ್ ಅವರನ್ನು ಪ್ರಜ್ಞಾಹೀನ ಮತ್ತು ಸ್ಪಂದಿಸದ ಸ್ಥಿತಿಯಲ್ಲಿ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ಅವರಿಗೆ ಯಾವುದೇ ನಾಡಿಮಿಡಿತ ಅಥವಾ ರೆಕಾರ್ಡ್ ಮಾಡಬಹುದಾದ ರಕ್ತದೊತ್ತಡ ಇರಲಿಲ್ಲ ಎಂದು ಆಸ್ಪತ್ರೆ ಹೇಳಿಕೆ ನೀಡಿದೆ.

ದೇಶದ ಅತ್ಯುನ್ನತ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಯಾದವ್ ಅವರು ದಶಕಗಳ ಕಾಲ ಜನತಾ ರಾಜಕೀಯದ ಕೇಂದ್ರಬಿಂದುವಾಗಿದ್ದರು. ಶರದ್ ಯಾದವ್ ಅವರು ಮೂರು ಬಾರಿ ರಾಜ್ಯಸಭೆಯ ಸದಸ್ಯರಾಗಿ, 7 ಬಾರಿ ಲೋಕಸಭೆಯ ಸಂಸದರಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!