September 20, 2024

ಉಪ್ಪಿನಂಗಡಿ: ಹುಳುವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿಕೆ ಆರೋಪ: ಅಧಿಕಾರಿಗಳಿಂದ ತಪಾಸಣೆ

0

ಉಪ್ಪಿನಂಗಡಿ: ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲೊಂದರಲ್ಲಿ ಹುಳುವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ತಪಾಸಣೆ ನಡೆಸಿದೆ.

ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಪೊಲೀಸ್ ಸಬ್‌ಇನ್‌ಸ್ಪೆೆಕ್ಟರ್ ರಾಜೇಶ್ ಕೆ.ವಿ., ವಿಎ ಮಹೇಶ್, ಕಂದಾಯ ಇಲಾಖಾ ಸಿಬ್ಬಂದಿ ಯತೀಶ್ ಮಡಿವಾಳ್, ಮತ್ತಿತರನ್ನು ಒಳಗೊಂಡ ಅಧಿಕಾರಿಗಳ ತಂಡ ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳ ತಪಾಸಣೆ ನಡೆಸಿದೆ.

ಮಾಂಸ ಸಂಗ್ರಹಣಾ ಫ್ರಿಡ್ಜ್‌ಗಳನ್ನು ಪರಿಶೀಲಿಸಿತು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು.

ಈ ವೇಳೆ ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖಾ ಪರವಾನಿಗೆಯನ್ನು ಹೊಂದದೇ ಇರುವುದು ಕಂಡು ಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಹೊಟೇಲನ್ನು ಬಂದ್ ಮಾಡಿಸಿದರು. ದಾಳಿ ವೇಳೆ ಸ್ಥಳೀಯ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!