ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಮತ್ತೆ ಇಬ್ಬರು ವೈದ್ಯರನ್ನು ಶುಕ್ರವಾರ ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಡಾ. ರಾಘವ ದತ್ತಾ(28), ಬೆಂಗಳೂರು ನಿವಾಸಿ ಡಾ: ಬಾಲಾಜಿ (29) ಬಂಧಿತ ಆರೋಪಿಗಳು. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.