February 3, 2026

ತಮಿಳುನಾಡು: ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈಗೆ ಝಡ್ ಶ್ರೇಣಿಯ ಭದ್ರತೆ

0
K-Annamalai-Picture.jpg

ತಮಿಳುನಾಡು: ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗೃಹ ಸಚಿವಾಲಯ ಅಣ್ಣಾಮಲೈ ಅವರಿಗೆ ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ.

ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ಇತ್ತು. ಸಿಆರ್​ಎಫ್‌ನ ಒಟ್ಟು 33 ಕಮಾಂಡೋಗಳು ಅವರಿಗೆ ಈ ಭದ್ರತೆಯನ್ನು ನೀಡಲಿದ್ದಾರೆ. ಅಣ್ಣಾಮಲೈ ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆಯಲ್ಲಿ ಅವರಿಗೆ ಈ ಭದ್ರತೆ ನೀಡಲಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರವರಿಗೆ ಮಾವೋವಾದಿಗಳು ಮತ್ತು ಧಾರ್ಮಿಕ ಉಗ್ರಗಾಮಿಗಳಿಂದ ಬೆದರಿಕೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ. ಈ ಕುರಿತು ಐಬಿ ಬೆದರಿಕೆ ವರದಿ ಬಂದ ನಂತರ ಅಣ್ಣಾಮಲೈ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!