February 3, 2026

ಮಾಜಿ ಸಚಿವನ ಪುತ್ರ ವಿಷ ಸೇವಿಸಿ ಆತ್ಮಹತ್ಯೆ

0
image_editor_output_image2138323874-1673594152335.jpg

ಚಂಡೀಗಢ: ಹರಿಯಾಣದ ಮಾಜಿ ಸಚಿವ ಮಂಗೇ ರಾಮ್ ರಾಠಿ ಅವರ ಪುತ್ರ ಜಗದೀಶ್ ರಾಠಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐಎನ್‌ಎಲ್‌ಡಿ ರಾಜ್ಯ ಮುಖ್ಯಸ್ಥ ನಫೆ ಸಿಂಗ್ ರಾಠಿ ಸೇರಿದಂತೆ ಆರು ಜನರ ವಿರುದ್ಧ ಕುಮ್ಮಕ್ಕು ನೀಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗದೀಶ್ (55) ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. “ಮಾಜಿ ಸಚಿವ ಮಂಗೇ ರಾಮ್ ರಾಠಿ ಅವರ ಪುತ್ರ ಜಗದೀಶ್ ರಾಠಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಜಜ್ಜರ್‌ನ ಪೊಲೀಸ್ ವರಿಷ್ಠಾಧಿಕಾರಿ ವಸೀಮ್ ಅಕ್ರಂ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!