ಕನ್ನಡ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಬಂಧನ
ಬೆಂಗಳೂರು: ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು, ನಂತರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎನ್ನುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಿನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್, ನಂತರ ಹಣ ಕೊಡದೇ ವಂಚಿಸಿದ್ದರು.
ಹಣ ಕೇಳುವುದಕ್ಕೆ ಹೋದವರ ಮೇಲೆಯೇ ಸುಳ್ಳು ಕೇಸ್ ಅನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.




