August 13, 2026

ಕಾಸರಗೋಡು: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ

0
IMG-20230113-WA0055.jpg

ಕಾಸರಗೋಡು: ಹಾಡಹಗಲೇ ಮನೆಗೆ ನುಗ್ಗಿ 11 ಪವನ್ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಹೇರೂರಿನ ಯಕ್ಷಿತ್ (23) ಎಂದು ಗುರುತಿಸಲಾಗಿದೆ.

ಒಂದು ವಾರದ ಹಿಂದೆ ಹೇರೂರಿನ ಆನಂದ ಎಂಬವರ ಮನೆಯಲ್ಲಿ ಕೃತ್ಯ ನಡೆದಿತ್ತು. ಆನಂದ ಹಾಗೂ ಕುಟುಂಬದವರು ಅಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ಸಮೀಪದ ದೇವಸ್ಥಾನಕ್ಕೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನು ಮನೆಯ ಕೊಠಡಿಯಲ್ಲಿ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣ ಕಳವು ಮಾಡಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!