August 13, 2026

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜತೆ ಮಾತನಾಡಿದ್ದ ವಿಚಾರ ವಿದ್ಯಾರ್ಥಿ ಮೇಲೆ ತಂಡದಿಂದ ಹಲ್ಲೆ: ಆರು ಜನರ ಮೇಲೆ ಪ್ರಕರಣ ದಾಖಲು

0
image_editor_output_image-845438089-1673621972677

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡಯೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ 3 ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾಕೀರ್ ಮಂಗಳೂರು ಬಲ್ಮಠ ಎಂಬಲ್ಲಿರುವ ಯೆನಪೋಯ್‌ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ನಿನ್ನೆ ಕಾಲೇಜು ಮುಗಿಸಿ ಕೆ.ಎಸ್,ಆರ್‌,ಟಿ,ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಈತ ಕುಳಿತುಕೊಂಡಿದ್ದ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದನ್ನು ಪ್ರಶ್ನಿಸಿ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಆರೋಪಿತರುಗಳಾದ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಶಾಕೀರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!