February 3, 2026

ಭಾರತ್ ಜೋಡೋ ಯಾತ್ರೆ ವೇಳೆ ಕುಸಿದು ಬಿದ್ದು ಕಾಂಗ್ರೆಸ್ ಸಂಸದ ಮೃತ್ಯು

0
image_editor_output_image-1118890495-1673670100937

ಚಂಡಿಗಢ: ಭಾರತ್‌ ಜೋಡೋ ಯಾತ್ರೆಯಲ್ಲಿ ಸಂಸದರೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಮುಂಜಾನೆ (ಜ.14 ರಂದು)  ಪಂಜಾಬ್‌ನ ಫಿಲ್ಲೌರ್‌ನಲ್ಲಿ ನಡೆದಿದೆ.

ಜಲಂಧರ್‌ನ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ ಮೃತಪಟ್ಟ ಸಂಸದ.

ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸಂತೋಖ್ ಸಿಂಗ್ ಅವರ ಹೃದಯ ಬಡಿಯ ಹೆಚ್ಚಾಗ ಅಸ್ವಸ್ಥರಾಗಿದ್ದಾರೆ. ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಿದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಹೃದಯಾಘಾತಾದಿಂದ ಸಂಸದ ಸಂತೋಖ್ ಸಿಂಗ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್‌ ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಸೆ.7 ರಿಂದ ಭಾರತ್‌ ಜೋಡೋ ಯಾತ್ರೆ ಆರಂಭವಾಗಿದೆ. ಜ.30 ರಂದು ಜಮ್ಮು -ಕಾಶ್ಮೀರದಲ್ಲಿ ಯಾತ್ರೆ ಮುಕ್ತಾಯ ಕಾಣಲಿದೆ.

Leave a Reply

Your email address will not be published. Required fields are marked *

error: Content is protected !!