February 3, 2026

ವಿಟ್ಲ: ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ:
ಪ್ರಕಟನೆ ಹೊರಡಿಸಿದ ವಿ.ಎಚ್ ಪಿ ಮತ್ತು ಭಜರಂಗದಳ

0
VHP-Bajrang-Dal-logo-700x375.jpg

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ 9 ದಿನಗಳ ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ತಿಳಿಸಿದೆ.

ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಜಾತ್ರೆಯಲ್ಲಿ ಅನ್ಯಮತೀಯರಿಗೆ ಅನುಮತಿ ನೀಡಿ ಗೊಂದಲ, ಗಲಭೆಗಳು ನಡೆದಿದ್ದು, ಈ ಹಿನ್ನೆಲೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅನ್ಯಮತೀಯರಿಗೆ ವ್ಯಾಪಾರ ನಿಷೇಧಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆನ್ನುವ ಉದ್ದೇಶದಿಂದಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಸಂತೆಗಳಲ್ಲಿ ಯಾವುದೇ ಅನ್ಯಮತೀಯರು ವ್ಯಾಪಾರ ನಡೆಸಬಾರದು ಎಂದು ವಿಶ್ವ ಹಿಂದೂ ಪರಿಷದ್ ವಿಟ್ಲ ಪ್ರಖಂಡದ ಅಧ್ಯಕ್ಷರಾದ ಪದ್ಮನಾಭ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!