August 13, 2026

ಕಾಂಗ್ರೆಸ್‌ನಿಂದ ಮಹಿಳೆಯರಿಗೆ ಭರ್ಜರಿ ಆಫರ್: ಮನೆ ಯಜಮಾನ್ತಿಗೆ ಪ್ರತಿ ತಿಂಗಳು 2 ಸಾವಿರ ರೂ

0
IMG-20230116-WA0040.jpg

ಬೆಂಗಳೂರು: ಕಾಂಗ್ರೆಸ್ ಪಕ್ಷವು ಇಂದು ಮತ್ತೊಂದು ಯೋಜನೆಯನ್ನು ಘೋಷಿಸಿದ್ದು, ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವುದಾಗಿ ಭರವಸೆ ನೀಡಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ‘ಗೃಹಲಕ್ಷ್ಮಿ ಯೋಜನೆ’ಯನ್ನು ಘೋಷಣೆ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ಹಾಕುವುದಾಗಿ ತಿಳಿಸಿದ್ದಾರೆ.

ಇನ್ನು ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ, ನಿಮ್ಮ ಮನೆ ನಿರ್ವಹಣೆ ಇನ್ಮುಂದೆ ಕಾಂಗ್ರೆಸ್ ಹೊಣೆ! ರಾಜ್ಯದ ಮಹಿಳೆಯರೇ, ದಿನಸಿ ವಸ್ತುಗಳು ದುಬಾರಿಯಾಗಿವೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಪ್ರತಿ ತಿಂಗಳ ದಿನಸಿ ಖರ್ಚು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!