August 13, 2026

ಕರ್ತವ್ಯ ನಿರತ ಇಬ್ಬರು ಪೊಲೀಸರ ಕೈಯಲ್ಲಿದ್ದ ಲಾಠಿ ಕಿತ್ತುಕೊಂಡು ಹಲ್ಲೆ : ಇಬ್ಬರು ಆರೋಪಿಗಳ ಬಂಧನ

0
image_editor_output_image1389044418-1673946584163.jpg

ಕುಣಿಗಲ್: ಇಬ್ಬರು ವ್ಯಕ್ತಿಗಳು ಕರ್ತವ್ಯ ನಿರತ ಇಬ್ಬರು ಪೊಲೀಸರ ಕೈಯಲ್ಲಿದ್ದ ಲಾಠಿ ಕಿತ್ತುಕೊಂಡು ಹಲ್ಲೆ ನಡೆಸಿರುವ ಘಟನೆ ಕಳೆದ ರಾತ್ರಿ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಗ್ರಾಮಲೆಕ್ಕಿಗ ಸೇರಿದಂತೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್‌ಗಳಾದ ಮಿಥನ್, ಸುಮನ್ ಅವರ ಮೇಲೆ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳಾದ ಗ್ರಾಮಲೆಕ್ಕಿಗ ವೆಂಕಟೇಶ್ ಹಾಗೂ ರಾಮಚಂದ್ರ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ತಿಳಿದು ಬಂದಿದೆ.

ಘಟನೆ ವಿವರ: ಕಳೆದ ರಾತ್ರಿ ಸುಮಾರು 11-45ಕ್ಕೆ ಪೊಲೀಸ್ ಕಾನ್ಸ್ಟೇಬಲ್‌ಗಳಾದ ಮಿಥನ್ ಹಾಗೂ ಸುಮನ್ ಹೌಸಿಂಗ್ ಬೋರ್ಡ್ ಸ್ಟೇಲ್ಲಾ ಮೇರಿಸ್ ಸ್ಕೂಲ್ ರಸ್ತೆಯಲ್ಲಿನ ಮೋದಿ ಕೇರ್ ಅಂಗಡಿಯ ಮುಂಭಾಗದಲ್ಲಿ ಸೆಲ್ಪಿ ತೆಗೆದುಕೊಳ್ಳುತ್ತಿರುವಾಗ ಅಲ್ಲೆ ಎದುರಿನ ಮನೆ ಮೇಲೆ ಇದ್ದ ಇಬ್ಬರು ವ್ಯಕ್ತಿಗಳು ಸಮವಸ್ತ್ರದಲ್ಲಿದ್ದ ಕಾನ್ಸ್ಟೇಬಲ್‌ಗಳನ್ನು ನೋಡಿ ಯಾರೋ ನೀವು ಮೋದಿ ಕೇರ್ ಮುಂದೆ ಸೆಲ್ಪಿ ಪೋಟೊ ತೆಗೆದುಕೊಳ್ಳುತ್ತೀರ ಎಂದು ಅವಾಚ್ಯವಾದ ಶಬ್ದಗಳಿಂದ ನಿಂದಿಸಿ ಕೂಗಾಡಿದ್ದಾರೆ. ಬಳಿಕ ಕಾನ್ಸ್ಟೇಬಲ್‌ಗಳು, ನಾವು ಪೊಲೀಸರು ರಾತ್ರಿ ಗಸ್ತಿಗಾಗಿ ಬಂದಿದ್ದೇವೆ. ನಮ್ಮ ಹಾಜರಾತಿಗಾಗಿ ಸೆಲ್ಪಿ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!