ಪುನೀತ್ ರಾಜ್ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ:
ಪುನೀತ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿ.ಎಂ ಘೋಷಣೆ
ಬೆಂಗಳೂರು: ಚಂದನವನದ ‘ರಾಜಕುಮಾರ’, ಕೋಟ್ಯಂತರ ಅಭಿಮಾನಿಗಳ ಪಾಲಿನ ಪ್ರೀತಿಯ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಒಲಿದಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದರು.
ಡಾ.ರಾಜ್ಕುಮಾರ್ ಅವರ ಸ್ಮಾರಕದಂತೆ ಪುನೀತ್ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಇದೇ ವೇಳೆ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು. ಪುನೀತ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವುದಾಗಿ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಗಣ್ಯರು ಎದ್ದು ನಿಂತು ಚಪ್ಪಾಳೆಯ ಸುರಿಮಳೆಗೈದರು.





