March 27, 2026

ಇಬ್ಬರು ಹೆಣ್ಣುಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

0
image_editor_output_image-1519191048-1673986881251.jpg

ಬಾಗಲಕೋಟೆ: ಮಹಿಳೆಯೊಬ್ಬರು ವಯಸ್ಸಿಗೆ ಬಂದ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮ ಬಳಿಯ ಘಟಪ್ರಭಾ ನದಿಗೆ ಹಾರಿ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೂಳೆಬಾವಿ ಗ್ರಾಮದ ಉಮಾ ಮಾಸರೆಡ್ಡಿ(42) ಹಾಗೂ ಪುತ್ರಿಯರಾದ ಐಶ್ವರ್ಯ(20), ಸೌಂದರ್ಯ(18) ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಕಮತಗಿ ಬಳಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲಪ್ರಭಾ ಸೇತುವೆ ಬಳಿ ಮೂವರ ಶವ ಪತ್ತೆಯಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಲಪ್ರಭಾ ನದಿಯಿಂದ ಶವಗಳನ್ನು ಹೊರತೆಗೆದರು. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓರ್ವ ಪುತ್ರಿ ಐಶ್ವರ್ಯ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಹಾಗೂ ಮತ್ತೊರ್ವ ಪುತ್ರಿ ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!