ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ: ಓರ್ವ ಮೃತ್ಯು
ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯಾನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..




