August 13, 2026

ಮಂಗಳೂರು: ಉಳ್ಳಾಲ ಇನ್ಸ್ ಪೆಕ್ಟರ್ ಇನ್ಸ್ಟಾಗ್ರಾಮ್ ಹ್ಯಾಕ್: ಹಣಕ್ಕಾಗಿ ನಕಲಿ ಖಾತೆಯಿಂದ ಬೇಡಿಕೆ

0
IMG-20230118-WA0038.jpg

ಮಂಗಳೂರು: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಮ್ ನಕಲಿ ಖಾತೆಯನ್ನು ತೆರೆದಿದ್ದು, ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿರುವ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಮ್ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ನೀಡಿದ್ದಾರೆ.

ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದ್ದು, ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ ಎಂದು ಠಾಣಾಧಿಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.

ಇನ್ನು ಅನೇಕ ಗಣ್ಯರ, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದ್ದು, ಈ ಕುರಿತು ಸೈಬರ್ ಸೆಲ್‍ನಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!