May 11, 2026

ಜೈನ ಸನ್ಯಾಸತ್ವ ಸ್ವೀಕರಿಸಿದ 20 ವರ್ಷದ ಯುವತಿ

0
image_editor_output_image1419085630-1674100218157.jpg

ವಿಜಯನಗರ: ಶ್ರೀಮಂತ ಕುಟುಂಬಕ್ಕೆ ಸೇರಿದ 20 ವರ್ಷದ ಯುವತಿಯೊಬ್ಬಳು ಹೊಸಪೇಟೆಯಲ್ಲಿ ಜೈನ ಸನ್ಯಾಸತ್ವ ಸ್ವೀಕರಿಸಿದ್ದಾಳೆ.

ಹೊಸಪೇಟೆ ಮೂಲದ ಶ್ರೀಮಂತ ಕುಟುಂಬಕ್ಕೆ ಸೇರಿದ ಜೈನ ಸಮುದಾಯದ ಯುವತಿ ಮುಮುಕ್ಷಾ ವಿಧಿ ಕುಮಾರಿ ಮಹಾವೀರ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಶ್ರೀ ಆದಿನಾಥ ಜೈನ ಶ್ವೇತಾಂಬರ ಸಂಘದ ವತಿಯಿಂದ ದೀಕ್ಷಾ ಕಾರ್ಯಕ್ರಮ‌ ಮಲ್ಲಿಗೆ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು.

ಹೊಸಪೇಟೆಯ ಉದ್ಯಮಿಯಾದ ದಿವಂಗತ ಕಾಂತಿಲಾಲಾ ಜಿ. ಜಿರಾವಲಾ ಮತ್ತು ರೇಖಾದೇವಿ ಜಿರಾವಲಾ ದಂಪತಿಯ ನಾಲ್ವರು ಪುತ್ರಿಯರಲ್ಲಿ ಮುಮುಕ್ಷಾ ಮೂರನೇಯವರು. 10ನೇ ತರಗತಿಯಲ್ಲಿ ಶೇ.94ರಷ್ಟು ಮತ್ತು ಪಿಯುಸಿಯಲ್ಲಿ ಶೇ.99ರಷ್ಟು ಫಲಿತಾಂಶ ಪಡೆದಿರುವ, ಪ್ರತಿಭಾನ್ವಿತ ವಿದ್ಯಾರ್ಥಿಯಾನಿಯಾಗಿದ್ದರು.‌

Leave a Reply

Your email address will not be published. Required fields are marked *

error: Content is protected !!