February 3, 2026

ದುಬೈನಿಂದ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 8 ಕೆ.ಜಿ. ಚಿನ್ನ ಸಹಿತ ಇಬ್ಬರು ಪ್ರಯಾಣಿಕರ ಬಂಧನ

0
image_editor_output_image1343416311-1674100734877.jpg

ಮುಂಬೈ : ದುಬೈನಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರು ಅಕ್ರಮ ಚಿನ್ನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್(ಡಿಆರ್ಐ) ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಪ್ರಯಾಣಿಕರಿಂದ ಸುಮಾರು 4.54 ಕೋಟಿ ಮೌಲ್ಯದ 8.23 ಕೆಜಿ ಚಿನ್ನವನ್ನು ವಶಪಡಿಕೊಂಡಿದ್ದಾರೆ.

ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಮುಂಬೈನ ಛತ್ರಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ, ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಚಿನ್ನವನ್ನು ದ್ರವರೂಪದಲ್ಲಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.

ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಇದೇ ವಿಮಾನ ನಿಲ್ದಾಣದಲ್ಲಿ ಇಬ್ಬರು ವಿದೇಶಿ ಮಹಿಳೆಯರಿಂದ ಸುಮಾರು 18 ಕೋಟಿ ಮೌಲ್ಯದ 1.79 ಕೆಜಿ ಕೊಕೇನ್ನ್ನು ವಶಪಡಿಕೊಳ್ಳಲಾಗಿತ್ತು.

ಇಥೋಪಿಯಾದ ಆಡೀಸ್ ಅಬಾಬಾದಿಂದ ಮುಂಬೈನ ಛತ್ರಪತಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಇಬ್ಬರು ವಿದೇಶಿ ಮಹಿಳೆಯರನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ ಕೊಕೇನ್ ಪತ್ತೆಯಾಗಿತ್ತು.

ಈ ಮಹಿಳೆಯರಲ್ಲಿ 4 ಕೈಚೀಲಗಳಲ್ಲಿ ಕೊಕೇನ್ ಇರುವ 8 ಪ್ಲಾಸ್ಟಿಕ್ ಪೌಚ್ ಗಳು ಪತ್ತೆಯಾಗಿದ್ದವು.

Leave a Reply

Your email address will not be published. Required fields are marked *

You may have missed

error: Content is protected !!