February 3, 2026

ಹೆದ್ದಾರಿಯಲ್ಲಿ ವ್ಯಾನ್‌, ಟ್ರಕ್‌ ಮಧ್ಯೆ ಭೀಕರ ರಸ್ತೆ ಅಪಘಾತ: 9 ಮಂದಿ ಮೃತ್ಯು

0
image_editor_output_image248882939-1674100856032.jpg

ಮಹಾರಾಷ್ಟ್ರ:ಗೋವಾ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ವ್ಯಾನ್‌ ಮತ್ತು ಟ್ರಕ್‌ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ 9 ಜನರು ಮೃತಪಟ್ಟಿದ್ದಾರೆ.

ಮೃತರಲ್ಲಿ 5 ಜನ ಪುರುಷರು ಮತ್ತು ಮೂವರು ಮಹಿಳೆಯರು ಹಾಗು ಒಂದು ಮಗು ಸೇರಿದೆ. ಒಂದು ಮಗು ಗಾಯಗೊಂಡಿದೆ. ರಾಯಗಡ ಜಿಲ್ಲೆ ರೆಪೊಲಿ ಎಂಬಲ್ಲಿ ದುರಂತ ಘಟಿಸಿದೆ.

ಈ ಘಟನೆ ಬೆಳಗ್ಗೆ ಅಂದಾಜು 4.45 ಗಂಟೆಗೆ ಸಂಭವಿಸಿದೆ. ಘಟನಾ ಸ್ಥಳವಾದ ರೆಪೊಲಿ ಗ್ರಾಮ ಮುಂಬೈಯಿಂದ ಸುಮಾರು 130 ಕಿಲೋ ಮೀಟರ್‌ ದೂರದಲ್ಲಿದೆ.

ದುರಂತದಲ್ಲಿ ಮೃತಪಟ್ಟವರನ್ನು ರತ್ನಗಿರಿ ಜಿಲ್ಲೆಯ ನಿವಾಸಿಗಳೆಂದು ಗುರುತಿಸಲಾಗಿದೆ. ಎಲ್ಲರೂ ಸಂಬಂಧಿಕರೆಂದು ಎಸ್ಪಿ ಸೋಮನಾಥ್ ಗರ್ಗೆ ತಿಳಿಸಿದರು.

ಗಾಯಗೊಂಡ ನಾಲ್ಕು ವರ್ಷದ ಮಗುವನ್ನು ಮಂಗಾಂವ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಅಸುನೀಗಿದ ಜನರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಅವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!