ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಾಳಿ: ಮೊಬೈಲ್ ಫೋನ್, ಗಾಂಜಾ ಪತ್ತೆ
ಹಾಸನ: ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದ್ದು, ಈ ವೇಳೆ ಮೊಬೈಲ್ ಫೋನ್, ಗಾಂಜಾ ಪತ್ತೆಯಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಎಎಸ್‌ಪಿ ತಮ್ಮಯ್ಯ, ಡಿವೈಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ 15 ಜನ ಪೊಲೀಸ್ ಅಧಿಕಾರಿಗಳು, 100ಕ್ಕೂ ಹೆಚ್ಚು ಪೊಲೀಸರು ಮುಂಜಾನೆ 5:45ರ ಸುಮಾರಿನಲ್ಲಿ ದಾಳಿ ನಡೆಸಿದ್ದಾರೆ.
ಜಿಲ್ಲಾ ಕಾರಾಗೃಹದಲ್ಲಿ 328 ಪುರುಷ ವಿಚಾರಣಾಧೀನ ಖೈದಿಗಳು, 17 ಮಹಿಳಾ ವಿಚಾರಣಾಧೀನ ಖೈದಿಗಳಿದ್ದು ಒಂದೂವರೆ ಗಂಟೆಗೂ ಹೆಚ್ಚು ಕಾಲ ಜೈಲಿನೊಳಗೆ ಶೋಧಕಾರ್ಯ ನಡೆಸಿದ್ದಾರೆ.
ವಿಚಾರಣಾಧೀನ ಖೈದಿಗಳ ಕೊಠಡಿಗಳ ತಪಾಸಣೆ ವೇಳೆ 2 ಮೊಬೈಲ್, ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.




