August 13, 2026

ಮನೆಯಿಂದ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

0
image_editor_output_image901709901-1674106783018.jpg

ಪಂಜ: ಮನೆಯಿಂದ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಜ.19 ರಂದು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.

ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ.ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ಬಾರದಿದ್ದುದರಿಂದ ಮನೆಯವರು ಹುಟುಕಾಟ ನಡೆಸಿದ್ದರು.

ಮನೆಯವರು ‍ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ತೆರಳಿದ್ದಾರೆ. ಸಾವಿನ ಕುರಿತು
ಪೋಲೀಸ್ ತನಿಖೆ ನಂತರ ಸ್ಪಷ್ಟ ಮಾಹಿತಿ ದೊರಕಲಿದೆ.

Leave a Reply

Your email address will not be published. Required fields are marked *

You may have missed

error: Content is protected !!