August 13, 2026

ಬಂಟ್ಟಾಳ: ಬಿ.ಸಿ ರೋಡ್ ಫ್ಲೈ ಓವರ್‌ನ ಅಡಿಭಾಗದಲ್ಲಿ ಬ್ಲ್ಯಾಕ್ ಲಿಸ್ಟ್‌ಗೆ ಸೇರಿದ ಅನುಮಾನಸ್ಪದ ಕಾರು ಪತ್ತೆ: ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸಂಶಯ

0
IMG-20230119-WA0007.jpg

ಬಂಟ್ವಾಳ: ಬಿ.ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫ್ಲೈ ಓವರ್ ನ ಅಡಿಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಅನಾಥವಾಗಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.

ಕೆ.ಎಲ್. ದಾಖಲೆಯ ವಾಹನ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ಧಿಯಾಗಿದ್ದ ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ.

ಇನ್ನು ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ಈ ಕಾರಿನ ದಾಖಲೆ ತೋರಿಸುತ್ತಿದ್ದು, ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ. ಇಲಾಖೆ ಕೆಲವೊಂದು ಕಾರಣಗಳನ್ನು ನೀಡಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿಸಿದ ದಾಖಲೆ ತೋರಿಸುತ್ತಿದೆ.

ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 ಎಂದು ಬರೆದಿದ್ದು, ಒನ್ಲಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!