ವಿಟ್ಲ: ಬುಲೆಟ್ ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಂಭೀರ ಗಾಯ
ವಿಟ್ಲ: ಸೂರಿಕುಮೇರ್ ಜಂಕ್ಷನ್ ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರಿಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ಮಾಣಿ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.




