September 20, 2024

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಬ್ಯಾನರ್‌ ತೆರವುಗೊಳಿಸಿದ ಪೊಲೀಸರು

0

ಮಂಗಳೂರು: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಇಲ್ಲಿನ ಕದ್ರಿ ಮಂಜುನಾಥ ದೇವಾಲಯದಲ್ಲಿ ಇದೇ 25ರ ವರೆಗೆ ನಡೆಯುತ್ತಿರುವ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿದ ಬ್ಯಾನರ್‌ ಹಾಕಿದ್ದನ್ನು ಗುರುವಾರ ತೆರವುಗೊಳಿಸಲಾಗಿದೆ.

ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಉಲ್ಲೇಖಿಸಿರುವ ಬ್ಯಾನರ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದ ಕದ್ರಿ ಘಟಕದ ಹೆಸರು ಇತ್ತು.

‘ಸನಾತನ ಧರ್ಮದ ಆಚರಣೆ ಮತ್ತು ನಂಬಿಕೆಯಲ್ಲಿ ವಿಶ್ವಾಸ ಇರುವ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಇದೆ.

ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು, ಕದ್ರಿ ದೇವಸ್ಥಾನ. ಇಂತಹ ಮನಃಸ್ಥಿತಿ ಮತ್ತು ವಿಗ್ರಹಾರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿತ್ತು.

Leave a Reply

Your email address will not be published. Required fields are marked *

error: Content is protected !!