ಮಂಗಳೂರು: ವೈದ್ಯರ ಡ್ರಗ್ಸ್ ಜಾಲ ಪ್ರಕರಣ: ಇಬ್ಬರು ವೈದ್ಯರು, 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು
ಮಂಗಳೂರು: ನಗರದಲ್ಲಿ ವೈದ್ಯರ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದ ಇಬ್ಬರು ವೈದ್ಯರು ಹಾಗೂ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸಮೀರ್, ಮೆಡಿಕಲ್ ಸರ್ಜನ್ ಡಾ. ಮಣಿಮಾರನ್ ಮುತ್ತು ಅಮಾನತಾಗಿರುವ ವೈದ್ಯರು. ಡಾ. ಕಿಶೋರಿಲಾಲ್, ಡಾ. ನದೀಯಾ ಸಿರಾಜ್, ಡಾ. ವರ್ಷಿಣಿ ಪತ್ರಿ, ಡಾ. ರಿಯಾ ಚಡ್ಡ, ಡಾ. ಇರಾ ಬಾಸಿನ, ಡಾ. ಕ್ಷಿತಿಜ್ ಗುಪ್ತಾ, ಡಾ. ಹರ್ಷ ಕುಮಾರ್ ವಿ.ಎಸ್. ಅಮಾನತು ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು ಎಂದು ಆಡಳಿತ ಮಂಡಳಿ ತಿಳಿಸಿದೆ.