September 20, 2024

‘ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ನಾನು ರಾಜಕೀಯ ನಿವೃತ್ತಿ’: ಸಿಎಂ ಇಬ್ರಾಹಿಂ ಶಪಥ

0

ವಿಜಯಪುರ: ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಘೋಷಿಸಿದದು, ಕಾಂಗ್ರೆಸ್-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿ ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ ಮುಗಿಯಲಿ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾರು ವಲಸೆ ಬರಲಿದ್ದಾರೆ ಎಂದು ಹೇಳುತ್ತೇನೆ ಎಂದರು.

ವಿಜಯಪುರ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದ್ದು, ನಾಗಠಾಣಾ ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಸೇರಿದಂತೆ ಇಬ್ಬರು ಶಾಸಕರಿಗೆ ಭವಿಷ್ಯದಲ್ಲಿ ಅಧಿಕಾರಕ್ಕೆ ಬರಲಿರುವ ಜೆಡಿಎಸ್ ಸರ್ಕಾರದಲ್ಲಿ ಸಚಿವರಾಗುವ ಅವಕಾಶವಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!