March 20, 2026

ಪುತ್ತೂರು: ಅಶೋಕ್ ರೈ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದಕ್ಕೆ ಸ್ವಾಗತ: ಆದರೆ ಟಿಕೆಟ್ ಆಕಾಂಕ್ಷೆ ಬೇಡವೆಂದ ಬ್ಲಾಕ್ ಕಾಂಗ್ರೆಸ್

0
IMG-20230120-WA0036.jpg

ಪುತ್ತೂರು: ಬಿಜೆಪಿ ಮುಖಂಡ ಉದ್ಯಮಿ ಅಶೋಕ್ ರೈ ಕೋಡಿಂಬಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಕ್ಕೆ ಸ್ವಾಗತ ಆದರೆ ಯಾವುದೇ ನಿರೀಕ್ಷೆಯಿಟ್ಟು ಸೇರಬಾರದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ರೈ ಸ್ಪಷ್ಟಪಡಿಸಿದ್ದಾರೆ.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಶೋಕ್ ರೈ ಕೋಡಿಂಬಾಡಿ ಸಹಿತ ಯಾರು ಬೇಕಾದರೂ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಬಹುದು. ಆದರೆ ಯಾರೂ ಕೂಡಾ ಪಕ್ಷಕ್ಕೆ ನಿರೀಕೆಯನ್ನು ಮುಂದಿಟ್ಟು ಸೇರಬಾರದು ಎಂದ ಅವರು ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೊದಲು ಸ್ಥಳೀಯ ನಾಯಕರ ಅಭಿಪ್ರಾಯವನ್ನು ಹೈಕಮಾಂಡ್ ಪಡೆದಿಲ್ಲ. ಪಕ್ಷಕ್ಕೆ ಯಾರನ್ನು ಸೇರ್ಪಡೆಗೊಳಿಸಬೇಕು ಎನ್ನುವ ನಿರ್ಧಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.

ಜನವರಿ 22 ರಂದು ಮಂಗಳೂರಿನಲ್ಲಿ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅಶೋಕ್ ರೈ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದು, ಅವರೊಂದಿಗೆ ನೂರಾರು ಮಂದಿ ಅವರ ಬೆಂಬಲಿಗರು ಸೇರ್ಪಡೆಗೊಳ್ಳುವ ವಿಚಾರ ಗಮನಕ್ಕೆ ಬಂದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!