February 3, 2026

ಕಣಿವೆಗೆ ಉರುಳಿ ಬಿದ್ದ ಬಸ್: ಮಹಿಳೆ ಸೇರಿ ಐವರು ಸಾವು, 15 ಮಂದಿ ಪ್ರಯಾಣಿಕರಿಗೆ ಗಾಯ

0
image_editor_output_image-205696640-1674278644110.jpg

ಶ್ರೀನಗರ: ಬಸ್ಸೊಂದು ಕಣಿವೆಗೆ ಉರುಳಿ ಬಿದ್ದು ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ.
ಬಿಲಾವರ್ ನ ಧನು ಪರೋಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಹನವು ಕೌಗ್ ನಿಂದ ಧನು ಪರೋಲೆಗೆ ತೆರಳುತ್ತಿತ್ತು.

ಈ ವೇಳೆ ಸ್ಕಿಡ್ ಆಗಿ ಕಣಿವೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿದ್ದ ಒಬ್ಬರು ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

Leave a Reply

Your email address will not be published. Required fields are marked *

error: Content is protected !!