February 3, 2026

ಬಯಲು ಶೌಚಕ್ಕೆ ತೆರಳಿದ್ದ ಬಾಲಕನನ್ನು ಹೊತ್ತೊಯ್ದು ಕೊಂದ ಚಿರತೆ

0
image_editor_output_image-1040111856-1674360473887.jpg

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೊಂದು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿರುವ ಘಟನೆ ತಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಬಾಲಕನಿಗಾಗಿ ಗ್ರಾಮಸ್ಥರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಸಮೀಪ ಬಾಲಕನ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

11 ವರ್ಷದ ಬಾಲಕ ಜಯಂತ್ ಕಳೆದ ರಾತ್ರಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಹೋಗಿದ್ದ. ಈ ವೇಳೆ ಚಿರತೆ ದಾಳಿ ಮಾಡಿ ಎಳೆದೊಯ್ದಿತ್ತು.

ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ರಾತ್ರಿಯಿಡೀ ಶೋಧ ಕೈಗೊಂಡಿದ್ದರು. ಆದ್ರೆ ಪತ್ತೆಯಾಗಿರಲಿಲ್ಲ. ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂ ರಾತ್ರಿಯೇ ಸ್ಥಳಕ್ಕೆ ಶಾಸಕರು ಮತ್ತು ಡಿಸಿ ಆಗಮಿಸಿದ್ದರು.

Leave a Reply

Your email address will not be published. Required fields are marked *

error: Content is protected !!