ರಾಜ್ಯದಲ್ಲಿರುವ ಮದ್ರಸಗಳ ಸಂಖ್ಯೆ ಕಡಿಮೆ ಮಾಡಲು ಕ್ರಮ: ಹಿಮಂತ ಬಿಸ್ವಾ ಶರ್ಮಾ
ಗುವಾಹಟಿ: ರಾಜ್ಯದಲ್ಲಿ ಮದ್ರಸಗಳ ಸಂಖ್ಯೆಯನ್ನು ಕಡಿಮೆ ಮಾಡಿ ಅವುಗಳನ್ನು ನೋಂದಣಿ ಮಾಡುವ ಬಗ್ಗೆ ಚಿಂತಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ಮೊದಲನೆಯದಾಗಿ ನಾವು ಅಸ್ಸಾಂನಲ್ಲಿರುವ ಮದರಾಸಗಳ ಸಂಖ್ಯೆಯನ್ನು ಇಳಿಕೆ ಮಾಡಲು ತಯಾರಿ ನಡೆಸಿದ್ದೇವೆ. ಮದ್ರಸಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಬೋಧಿಸಲು ಕ್ರಮ ವಹಿಸುತ್ತೇವೆ. ಜೊತೆಗೆ ಮದರಾಸಗಳನ್ನು ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ.




