August 13, 2026

ಕುಳಾಯಿಗುಡ್ಡೆ ರೈಲ್ವೆ ಸೇತುವೆ ಬಳಿ ಅಪರಿಚಿತ ಯುವಕನ‌ ಮೃತದೇಹ ಪತ್ತೆ

0
image_editor_output_image634658249-1674381326489.jpg

ಮಂಗಳೂರು: ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿ ಅಪರಿಚಿತ ಯುವಕನೊಬ್ಬನ ಮೃತದೇಹವು ರೈಲು ಹಳಿಗಳ ಮೇಲೆ ಪತ್ತೆಯಾಗಿದೆ.

ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ ಎಂದು ಅಂದಾಜಿಸಲಾಗಿದ್ದು, ಈತ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ.

ಮೃತ ವ್ಯಕ್ತಿಯ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯನ್ನು 0824-2220540 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!