August 13, 2026

ಕಡಬ: ಏಣಿತ್ತಡ್ಕದಲ್ಲಿ ತೆಪ್ಪ ಮಗುಚಿ ಮಹಿಳೆ ಸಾವು

0
IMG-20230122-WA0013.jpg

ಕಡಬ: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ನಡೆದಿದೆ.

ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ ಮಹಿಳೆ.

ಕುಮಾರಧಾರ ನದಿಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ತೆಪ್ಪದ ಮೂಲಕ ನದಿಯ ಮದ್ಯ ಭಾಗಕ್ಕೆ ಬಂದಾಗ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ಮಗುಚಿ ಬಿದ್ದಿದ್ದು, ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು ಹುಲ್ಲು ತುಂಬಿದ್ದ ಗೋಣಿ ಚೀಲದ ಸಹಾಯದಿಂದ ಈಜಿ ದಡ ಸೇರಿದ್ದಾರೆ. ಆದರೆ ಗೀತಾ ನೀರಿನಲ್ಲಿ ಮುಳುಗಿದ್ದಾರೆ.

ಇನ್ನು ವಿಷಯ ತಿಳಿದು ನೀರಿಗಿಳಿದ ಸ್ಥಳೀಯರಾದ ರಾಮಕೃಷ್ಣ, ನೇತ್ರಾಕ್ಷ ಮತ್ತಿತರರು ಹುಡುಕಾಡಿ ಗೀತಾ ಅವರನ್ನು ರಕ್ಷಿಸುವ ಪ್ರಯತ್ನ ಪಟ್ಟರಾದರೂ ಅದಾಗಲೇ ಗೀತಾ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮೃತರ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!