March 26, 2026

ಸ್ಯಾಂಡಲ್‌ವುಡ್‌ನ ಹೆಸರಾಂತ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

0
IMG-20230123-WA0044.jpg

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹೆಸರಾಂತ ಹಿರಿಯ ನಟ ಲಕ್ಷ್ಮಣ್(74) ಹೃದಯಾಘಾತದಿಂದಾಗಿ ಇಂದು ನಿಧನರಾಗಿದ್ದಾರೆ.

ಯಜಮಾನ, ಸೂರ್ಯವಂಶ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಅವರಿಗೆ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಎದೆನೋವು ಕಾಣಿಸಿಕೊಂಡು ಮುಂಜಾನೆ ಸಾವನ್ನಪ್ಪಿದ್ದು, ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಇನ್ನು ಲಕ್ಷ್ಮಣ್ ಅವರು ಅನೇಕ ಸಿನಿಮಾದಲ್ಲಿ ಖಳ ನಟನಾಗಿಯೂ ಅಭಿನಯಿಸಿದ್ದು, ವೃತ್ತಿ ಜೀವನದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದರು.

Leave a Reply

Your email address will not be published. Required fields are marked *

error: Content is protected !!