March 26, 2026

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ಪತ್ತೆ: ಪೊಲೀಸರಿಂದ ತನಿಖೆ ಆರಂಭ

0
IMG-20230123-WA0051.jpg

ಕಾಸರಗೋಡು: ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಂಗುಯಿ ಎಂಬಲ್ಲಿ ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕುಂಡಂಗುಯಿ ನಿರ್ಕಾಯಿಯ ನಿವಾಸಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಏಳನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (12) ಮೃತಪಟ್ಟವರು.

ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಬಾಲಕಿ ಶ್ರಿನಂದಾರವರ ಮೃತದೇಹ ಕೋಣೆಯಲ್ಲಿ ಪತ್ತೆಯಾಗಿದೆ.

ಪೊಲೀಸರು ಸ್ಥಳಕ್ಕಾಮಿಸಿ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!