July 16, 2026

ಸುಳ್ಯ: ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಇನೋವಾ ಕಾರು: ಓರ್ವನ ಕಾಲಿಗೆ ಗಂಭೀರ ಗಾಯ

0
IMG-20230123-WA0067.jpg

ಸುಳ್ಯ: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದು ಅದರಲ್ಲಿದ್ದ ಓರ್ವನ ಕಾಲು ಜಖಂಗೊಂಡ ಘಟನೆ ಸುಳ್ಯದ ಪರಿವಾರಕಾನದ ಬಳಿ ನಡೆದಿದೆ.

ಮಣಿಪಾಲ ಮೂಲದ ಸಮೃದ್ಧಿ ಸೊಸೈಟಿ ಸಂಸ್ಥೆಗೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇನ್ನು ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದಿಂದ ಕಾರಿನಲ್ಲಿದ್ದ ಓರ್ವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!