February 3, 2026

ಇಂದು ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆ: ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ

0
image_editor_output_image-563639226-1674501517060.jpg

ಬೆಂಗಳೂರು: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಆದರೆಕ, ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಸ್ಪಷ್ಟಪಡಿಸಿವೆ.

‘ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟನೆಗಳ ಮುಖಂಡರು, ಸ್ವಯಂಸೇವಕರು ಧರಣಿ ನಡೆಸಲು ನಿರ್ಧರಿಸಿದ್ದೇವೆ. ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆಗಳ ಪ್ರತಿನಿಧಿಗಳು ಧರಣಿ ನಡೆಸಲಿದ್ದಾರೆ. ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿ ಸಾರ್ವನಿಕರಿಗೆ ತೊಂದರೆ ನೀಡುವ ಉದ್ದೇಶ ಇಲ್ಲ. ಮೊದಲ ಹಂತದಲ್ಲಿ ಸಾಂಕೇತಿಕ ಧರಣಿಯನ್ನಷ್ಟೇ ನಡೆಸಲಾಗುವುದು’ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್‌.ವಿ. ಅನಂತಸುಬ್ಬರಾವ್ ‘ಪ‍್ರಜಾವಾಣಿ’ಗೆ ತಿಳಿಸಿದರು.

‘14 ಬೇಡಿಕೆಗಳನ್ನು ಮುಂದಿಟ್ಟು ಆರು ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಈ ಹೋರಾಟ ನಡೆಸುತ್ತಿದ್ದೇವೆ. ವೇತನ ಹೆಚ್ಚಳ ಒಪ್ಪಂದ 2020ರ ಜ.1ರಿಂದ ಬಾಕಿ ಉಳಿದಿದೆ. ಮೂರು ವರ್ಷಗಳಿಂದ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಕುಟುಂಬ ನಿರ್ವಹಣೆ ಸಾಧ್ಯವಾಗದೆ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಧರಣಿ ನಡೆಸಲು ಮುಂದಾಗಿದ್ದೇವೆ’ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!