February 3, 2026

ಬ್ರಹ್ಮಾವರ: ರಂಗ ಭೂಮಿ ಯುವ ನಟ ಕುಸಿದು ಬಿದ್ದು ಮೃತ್ಯು

0
image_editor_output_image572257356-1674502302788.jpg

ಬ್ರಹ್ಮಾವರ: ರಂಗ ಭೂಮಿ ಯುವ ನಟರೊಬ್ಬರು ಕಲಾ ಮಾತೆಯ ಸೇವೆಯಲ್ಲಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ. ಜ.22ರಂದು ಮಧ್ಯಾಹ್ನ ವೇಳೆ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.

ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!