August 15, 2026

ಉಡುಪಿ: ಮನೆಯಿಂದ ಚಿನ್ನಾಭರಣ ದರೋಡೆ ಸಹಿತ ಪ್ರತ್ಯೇಕ ಕಳವು ಪ್ರಕರಣ: 19 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಇಬ್ಬರು ಆರೋಪಿಗಳ‌ ಬಂಧನ

0
image_editor_output_image-767798333-1674502593939.jpg

ಉಡುಪಿ: ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಸೊತ್ತು ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದರು.

ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿರುವ ಬೆಂಗಳೂರಿನ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿ ರವರ ಮನೆಯಲ್ಲಿ 2022 ಸಾಲಿನ ಸೆಪ್ಟಂಬರ್ ತಿಂಗಳಿನಲ್ಲಿ ರಾತ್ರಿ ಕಳ್ಳರು ಮನೆಯ ಬಾಗಿಲು ಒಡೆದು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.
ಈ ಆರೋಪಿಗಳಿಂದ ಕಳ್ಳತನ ನಡೆಸಿದ ಸುಮಾರು 15 ಲಕ್ಷದ ಚಿನ್ನಾಭರಣ, ಕಳ್ಳತನ ಮಾಡಿದ ಹಣದಿಂದ ಖರೀದಿಸಿದ ಸುಮಾರು 2 ಲಕ್ಷ 50 ಸಾವಿರ ಮೌಲ್ಯದ ಪೋರ್ಡ್‌ ಮಾಂಡಿಯೋ ಕಾರು, ಸುಮಾರು 1 ಲಕ್ಷ ಮೌಲ್ಯದ ಹಿರೋ ಕಂಪೆನಿಯ ಡೆಸ್ಟೀನಿ ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 50000 ಸಾವಿರ ಮೌಲ್ಯದ ಹೊಂಡಾ ಆ್ಯಕ್ಟೀವ್ ಮೋಟಾರ್ ಸೈಕಲ್ ಆರೋಪಿಗಳಿಂದ ಸ್ವಾಧೀನ ಪಡಿಸಲಾಗಿರುತ್ತದೆ. ಸ್ವಾಧೀನ ಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 19 ಲಕ್ಷ ಆಗಿರುತ್ತದೆ.

Leave a Reply

Your email address will not be published. Required fields are marked *

You may have missed

error: Content is protected !!