ಕಡಬ | ಸಾಮಾಜಿಕ ಜಾಲತಾಣದಲ್ಲಿ ನಿಂದನೆಯ ಪೋಸ್ಟ್: ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು ಆದೇಶಕ್ಕೆ ತಡೆ
ಕಡಬ: ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ, ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಹಾಗೂ ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಪೋಸ್ಟ್ ಹಾಕುತ್ತಿದ್ದ ಆರೋಪ ಎದುರಿಸುತಿದ್ದ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ ಅಮಾನತುಗೊಳಿಸಲಾಗಿತ್ತು, ಇದೀಗ ಈ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಧೀಕರಣ ತಡೆ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಡಾಫೆಯಾಗಿ ವರ್ತಿಸಿದ ಕೊಯಿಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.


